ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಹಿಂಶಿಪೋರಾ ಪ್ರದೇಶದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸ್, ಸೇನೆ ಹಾಗೂ ಸಿಆರ್‌ಪಿಎಫ್ ನಡೆಸಿದ ಜಂಟಿ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಹತ್ಯೆಯಾದವರ ಗುರುತು ಪತ್ತೆಹಚ್ಚುವ ಕಾರ್ಯ ನಡೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
#UPDATE | 2 terrorists killed in the encounter; incriminating materials, including arms & ammunition, recovered. Further search is underway; details awaited: J&K Police
— ANI (@ANI) February 25, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.