ಗುರುವಾರ , ಫೆಬ್ರವರಿ 25, 2021
28 °C

ಕದನ ವಿರಾಮ ಉಲ್ಲಂಘಿಸಿ ಪಾಕ್ ನಡೆಸಿದ್ದ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಪಾಕಿಸ್ತಾನ ಸೇನೆ ಕಳೆದ ವಾರ ಕದನ ವಿರಾಮ ಉಲ್ಲಂಘಿಸಿ ನಡೆಸಿದ್ದ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಇಂದು ಹುತಾತ್ಮರಾಗಿದ್ದಾರೆ.

ಈ ಸಂಬಂಧ ಭಾರತೀಯ ಸೇನೆ ಪ್ರಕಟಣೆ ಹೊರಡಿಸಿದ್ದು, ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ವಲಯದಲ್ಲಿ ಪಾಕ್ ಸೇನೆ ಜನವರಿ 18ರಂದು ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತ ಸೇನಾಪಡೆ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ತಿಳಿಸಿದೆ.

‘ಎನ್.‌ಕೆ. ನಿಶಾಂತ್‌ ಶರ್ಮಾ ಧೈರ್ಯಶಾಲಿ, ಅಪಾರ ಉತ್ಸಾಹಿ ಹಾಗೂ ಪ್ರಾಮಾಣಿಕ ಸೈನಿಕರಾಗಿದ್ದರು. ಅವರ ಸರ್ವೋಚ್ಛ ತ್ಯಾಗ ಮತ್ತು ಕರ್ತವ್ಯ ನಿಷ್ಠೆಗಾಗಿ ದೇಶವು ಸದಾ ಅವರಿಗೆ ಋಣಿಯಾಗಿರುತ್ತದೆ’ ಎಂದೂ ಗೌರವ ಸಮರ್ಪಿಸಿದೆ.

ಪಾಕ್‌ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಶರ್ಮಾ ಅವರಿಗೆ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು