ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ: ಉನ್ನತ ಮಟ್ಟದ ತನಿಖೆಗೆ ಲೆ. ಗವರ್ನರ್ ಆದೇಶ

Last Updated 1 ಜನವರಿ 2022, 5:41 IST
ಅಕ್ಷರ ಗಾತ್ರ

ಶ್ರೀನಗರ: ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕನಿಷ್ಠ 12 ಜನರು ಮೃತಪಟ್ಟು, 20 ಜನರು ಗಾಯಗೊಂಡಿರುವ ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದು, ಘಟನೆಯ ಕುರಿತು ವಿವರಿಸಲಾಗಿದೆ. 'ಗೌರವಾನ್ವಿತ ಪ್ರಧಾನಿ ಮೋದಿಯವರು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗಾಗಿ ತ್ರಿಕೂಟ ಬೆಟ್ಟಗಳ ಮೇಲಿನ ದೇವಸ್ಥಾನದ ಮೂರನೇ ಗೇಟ್ ಬಳಿ ಶನಿವಾರ ಮುಂಜಾನೆ ಭಕ್ತರ ದಂಡು ನೆರೆದಿತ್ತು. ಈ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವಿಗೀಡಾಗಿರುವುದು ತುಂಬ ದಃಖವನ್ನುಂಟು ಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಘಟನೆ ಬಗ್ಗೆ ತಿಳಿಸಿದ್ದೇನೆ. ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಸಲಾಗಿದೆ. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಮ್ಮುವಿನ ಎಡಿಜಿಪಿ ಮತ್ತು ವಿಭಾಗೀಯ ಆಯುಕ್ತರು ತನಿಖಾ ಸಮಿತಿಯಲ್ಲಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರವನ್ನು ಲೆಫ್ಟಿನೆಂಟ್ ಗವರ್ನರ್ ಘೋಷಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT