ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಭಾರತೀಯ ಸೇನೆಯಿಂದ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಭಾರೀ ಅನಾಹುತ

Last Updated 23 ಏಪ್ರಿಲ್ 2021, 8:16 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನವೊಂದು(ಐಇಡಿ) ಪತ್ತೆಯಾಗಿದ್ದು, ಅದನ್ನು ಸೂಕ್ತ ಸಮಯದಲ್ಲಿ ನಿಷ್ಕ್ರಿಯಗೊಳಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಪುಲ್ವಾಮದ ಸರ್ಕಲ್‌ ರಸ್ತೆಯಲ್ಲಿ ಭದ್ರತಾ ಪಡೆಗೆ ಐಇಡಿಯೊಂದು ಸಿಕ್ಕಿದೆ. ಬಳಿಕ ಬಾಂಬ್‌ ನಿಷ್ಕ್ರಿಯ ದಳದ ಸಹಾಯದಿಂದ ಅದನ್ನು ನಾಶಪಡಿಸಲಾಗಿದೆ. ಈ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT