ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಿಕರ ಹತ್ಯೆ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಭದ್ರತೆ ಹೆಚ್ಚಳ

Last Updated 9 ನವೆಂಬರ್ 2021, 11:47 IST
ಅಕ್ಷರ ಗಾತ್ರ

ಶ್ರೀನಗರ: ನಾಗರಿಕರನ್ನು ಗುರಿಯಾಗಿರಿಸಿ ಉಗ್ರರು ಇತ್ತೀಚೆಗೆನಡೆಸಿದ ದಾಳಿಯನ್ನು ಗಮನದಲ್ಲಿರಿಸಿ ರಕ್ಷಣಾ ಪಡೆಗಳು ಶ್ರೀನಗರದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಶ್ರೀನಗರದ ಬಾಟಮಲೋ ಜನನಿಬಿಡ ಪ್ರದೇಶದಲ್ಲಿ ಉಗ್ರರು ಭಾನುವಾರ ಸಂಜೆ ನಡೆಸಿದ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮೊದಲು, ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಉದ್ಯಮಿ ರೋಷನ್ ಲಾಲ್ ಮಾವಾ ಎನ್ನುವವರ ಬಳಿ ಸೇಲ್ಸ್‌ಮನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಅಕ್ಟೋಬರ್ 2ರಿಂದ ಅಕ್ಟೋಬರ್ 17ರವರೆಗೆ ಅಲ್ಪಸಂಖ್ಯಾತ ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 11 ನಾಗರಿಕರು ಮೃತಪಟ್ಟಿದ್ದರು. ಅದಾದ ಮೂರು ವಾರಗಳ ಬಳಿಕ ಮತ್ತೆ ದಾಳಿ ನಡೆದಿರುವುದು ಆತಂಕ ಹೆಚ್ಚಿಸಿದೆ.

ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,‘ಅಕ್ಟೋಬರ್‌ನಲ್ಲಿ ನಿರ್ಮಾಣವಾಗಿದ್ದಂತಹ ಪರಿಸ್ಥಿತಿ ಸೃಷ್ಟಿಯಾಗಲು ಬಿಡುವುದಿಲ್ಲ. ರಕ್ಷಣಾ ಪಡೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಸುರಕ್ಷತೆಯ ದೃಷ್ಟಿಯಿಂದ ವಾಹನಗಳು ಮತ್ತು ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಮತ್ತು ಗುಪ್ತಚರ ಮಾಹಿತಿ ಸಲುವಾಗಿ ಸಾಕಷ್ಟು ಪೊಲೀಸರುನಗರದೆಲ್ಲೆಡೆಗೆ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ‘ ಎಂದು ತಿಳಿಸಿದ್ದಾರೆ.

ಮುಂದುವರಿದು,‘ನಗರದೆಲ್ಲೆಡೆ ಸಿಸಿಟಿವಿ ಕಣ್ಗಾವಲು ಇಡಲಾಗಿದೆ. ಸಾರ್ವಜನಿಕರ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ‘ ಎಂದು ಹೇಳಿದ್ದಾರೆ. ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದ್ದು, ಇದರಿಂದ ಸಂಭವನೀಯದುರಂತಗಳನ್ನು ತಪ್ಪಿಸಬಹುದಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ನಾಗರಿಕರ ಮೇಲಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ ನಂತರ, ಕೇಂದ್ರೀಯ ಅರೆಸೇನಾ ಪಡೆಯ 5,000 ಸೈನಿಕರನ್ನು ಹೆಚ್ಚುವರಿಯಾಗಿ ನಿಯೋಜಿಸಲು ಕೇಂದ್ರವು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT