ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮ, ಒಬ್ಬರಿಗೆ ಗಾಯ

Last Updated 14 ಆಗಸ್ಟ್ 2020, 5:32 IST
ಅಕ್ಷರ ಗಾತ್ರ

ಜಮ್ಮು-ಕಾಶ್ಮೀರ: ಶ್ರೀನಗರದ ಹೊರವಲಯದಲ್ಲಿ ಶುಕ್ರವಾರ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದಾಳಿ ಸಂದರ್ಭದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಫಲಕಾರಿಯಾಗದೇ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ. ಒಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. .

'ನೌಗಾಮ್‌ ಬೈಪಾಸ್ ಬಳಿ ಪೊಲೀಸ್ ತಂಡದ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ. ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಇಬ್ಬರು ಹುತಾತ್ಮರಾದರು. ಘಟನೆ ನಡೆದ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಕಾರ್ಯಚರಣೆ ಕೈಗೊಳ್ಳಲಾಗಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುತ್ತದೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT