ಮಂಗಳವಾರ, ಮಾರ್ಚ್ 21, 2023
27 °C

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್: ಲಷ್ಕರ್–ಇ–ತೈಯಬಾದ ಮೂವರು ಉಗ್ರರ ಹತ್ಯೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌–ಇ–ತೈಯಬಾ (ಎಲ್‌ಇಟಿ) ಸಂಘಟನೆಯ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಉಗ್ರರು ಅಡಗಿಕೊಂಡಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಆಧರಿಸಿ, ಶೋಪಿಯಾನ್‌ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿರುವ ಮುಂಜ್‌ ಮಾರ್ಗ್‌ನಲ್ಲಿ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಉಗ್ರ ಸಂಘಟನೆ ಎಲ್‌ಇಟಿಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹತ್ಯೆಯಾದವರ ಗುರುತು ಪತ್ತೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು 'ಕಾಶ್ಮೀರ ವಲಯ ಪೊಲೀಸ್‌' ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು