ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು-ಕಾಶ್ಮೀರಕ್ಕೆ ಶೀಘ್ರದಲ್ಲೇ ಬಿಜೆಪಿ ಮುಖ್ಯಮಂತ್ರಿ: ರವೀಂದರ್ ರೈನಾ

Last Updated 5 ನವೆಂಬರ್ 2021, 9:11 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಶೀಘ್ರದಲ್ಲೇ ಬಿಜೆಪಿ ಮುಖ್ಯಮಂತ್ರಿ ಚುನಾಯಿತರಾಗಲಿದ್ದಾರೆ. ಸದ್ಯದಲ್ಲೇ ಚುನಾವಣೆ ನಡೆಯಲಿದೆ ಎಂದು ಪಕ್ಷದ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ.

ಶ್ರೀನಗರದ ಶಂಕರಾಚಾರ್ಯ ದೇಗುಲದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಜಮ್ಮು-ಕಾಶ್ಮೀರದ ಜನ ಬಿಜೆಪಿಯನ್ನು ಸ್ವೀಕರಿಸುತ್ತಿರುವ ರೀತಿ ನೋಡಿದರೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಮುಖ್ಯಮಂತ್ರಿ ಚುನಾಯಿತರಾಗಲಿದ್ದಾರೆ’ ಎಂದು ಹೇಳಿದ್ದಾರೆ.

ಕ್ಷೇತ್ರಗಳ ಗುರುತಿಸುವಿಕೆ ಪ್ರಕ್ರಿಯೆ ಮುಗಿದ ಕೂಡಲೇ ಚುನಾವಣೆ ನಡೆಯಲಿದೆ ಎಂದೂ ಅವರು ಹೇಳಿದ್ದಾರೆ. 2018ರಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಲ್ಲಿ ಚುನಾವಣೆ ನಡೆದಿಲ್ಲ.

ಶ್ರೀನಗರ-ಶಾರ್ಜಾ ವಿಮಾನ ಪ್ರಯಾಣಕ್ಕೆ ಪಾಕಿಸ್ತಾನವು ವಾಯು ಪ್ರದೇಶ ಅನುಮತಿ ನಿರಾಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ರೈನಾ, ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯಾಗುವುದು ಆ ದೇಶಕ್ಕೆ ಬೇಕಿಲ್ಲ ಎಂಬುದು ಈ ನಿರ್ಧಾರದಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT