ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ಶಿಬಿರಗಳಿಗೆ ವಲಸೆ ಕಾರ್ಮಿಕರ ಸ್ಥಳಾಂತರ; ವರದಿ ನಿರಾಕರಿಸಿದ ಪೊಲೀಸ್

Last Updated 18 ಅಕ್ಟೋಬರ್ 2021, 5:05 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ.

ಅದೇ ರೀತಿ ಸ್ಥಳೀಯರಲ್ಲದವರು ಪೊಲೀಸ್‌ ಠಾಣೆಗಳಿಗೆ ಬರಬೇಕೆಂದುಸೂಚಿಸಲಾಗಿದೆ ಎಂದೂ ವರದಿಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಶ್ಮೀರ ಐಜಿಪಿ ವಿಜಯ್‌ ಕುಮಾರ್‌, ʼಅಂತಹ ಯಾವುದೇ ಆದೇಶ ಹೊರಡಿಸಿಲ್ಲ. ಇದು ಸುಳ್ಳು ಸುದ್ದಿʼ ಎಂದು ಸ್ಪಷ್ಟಪಡಿಸಿದ್ದಾರೆ.

ಅಕ್ಟೋಬರ್‌ 5ರಂದುಶ್ರೀನಗರದ ಪ್ರಮುಖ ಔಷಧ ಅಂಗಡಿ ಮಾಲೀಕ ಮಖಾನ್‌ ಲಾಲ್‌ ಬಿಂದ್ರೂ ಎನ್ನುವವರನ್ನು ಉಗ್ರರು ಹತ್ಯೆ ಮಾಡಿದ್ದರು. ಅದಾದ ನಂತರಕಣಿವೆ ರಾಜ್ಯದಾದ್ಯಂತ ಉಗ್ರರು ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT