ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಧ್ವನಿವರ್ಧಕ ತೆರವು: ಕರ್ನಾಟಕ, ಉತ್ತರ ಪ್ರದೇಶದ ಹಾದಿ ಹಿಡಿದ ಜಮ್ಮು ಪಾಲಿಕೆ

Last Updated 17 ಮೇ 2022, 16:35 IST
ಅಕ್ಷರ ಗಾತ್ರ

ಜಮ್ಮು: ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ತೆರವಿಗೆ ಜಮ್ಮು ನಗರ ಪಾಲಿಕೆ (ಜೆಎಂಸಿ) ಮಂಗಳವಾರ ನಿರ್ಣಯ ಕೈಗೊಂಡಿದೆ.

ಕರ್ನಾಟಕ, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಅಕ್ರಮ ಧ್ವನಿವರ್ಧಕಗಳ ವಿರುದ್ಧ ಇತ್ತೀಚೆಗೆ ಇಂಥದ್ದೇ ಕ್ರಮ ಕೈಗೊಳ್ಳಲಾಗಿದೆ.

ಧಾರ್ಮಿಕ ಸ್ಥಳಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಅನುಮತಿ ಇಲ್ಲದೆ ಅಳವಡಿಸಲಾಗಿರುವ ಧ್ವನಿವರ್ಧಕಗಳ ತೆರವಿಗೆ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಆದೇಶ ನೀಡುವ ನಿಲುವಳಿಯನ್ನು ಜಮ್ಮು ನಗರ ಪಾಲಿಕೆಯ ವಾರ್ಡ್ ಸಂಖ್ಯೆ 3ರ ಕಾರ್ಪೊರೇಟರ್ ನರೋತ್ತಮ್ ಶರ್ಮಾ ಅವರು ಮಂಡಿಸಿದರು.

ನಿಲುವಳಿ ಪ್ರಕಾರ, ಅನುಮತಿ ಇಲ್ಲದೆ ಧ್ವನಿವರ್ಧಕ ಅಳವಡಿಸಿರುವ ಪ್ರದೇಶಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6ರ ನಡುವಣ ಅವಧಿಯಲ್ಲಿ ಧ್ವನಿವರ್ಧಕ ಬಳಸದೆ ಇರುವುದನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು ಖಾತರಿಪಡಿಸಿಕೊಳ್ಳಬೇಕಿದೆ.

ಜಮ್ಮು ನಗರ ಪಾಲಿಕೆಯ ಈ ನಿಲುವಳಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT