ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಪೊಲೀಸ್‌ ಬಸ್‌ ಮೇಲೆ ಉಗ್ರರ ದಾಳಿ: ಇಬ್ಬರು ಸಾವು, 12 ಮಂದಿಗೆ ಗಾಯ

ಶ್ರೀನಗರದ ಝೆವಾನ್‌ ಪ್ರದೇಶದ ಬಳಿ ಘಟನೆ: ಮೂವರ ಸ್ಥಿತಿ ಗಂಭೀರ
Last Updated 13 ಡಿಸೆಂಬರ್ 2021, 15:45 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿಯ ಝೆವಾನ್‌ ಪ್ರದೇಶದ ಬಳಿ ಸೋಮವಾರ ಉಗ್ರರು ಪೊಲೀಸ್‌ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ.

‘ಪಂತ್‌ ಚೌಕದ ಬಳಿ ನಿಲ್ಲಿಸಿದ್ದ ಭಾರತೀಯ ಮೀಸಲು ಪೊಲೀಸ್‌ (ಐಆರ್‌ಪಿ) 9ನೇ ತುಕಡಿಯ ಬಸ್‌ ಮೇಲೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದು, ದಾಳಿಯಲ್ಲಿ 14 ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ’ಎಂದು ಮೊದಲಿಗೆ ವರದಿಯಾಗಿತ್ತು. ನಂತರ ಲಭ್ಯವಾದ ಮಾಹಿತಿ ಪ್ರಕಾರ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ.

‘ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಗ್ರರ ವಿರುದ್ಧ ಭಾರಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಝೆವಾನ್‌ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT