ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳಿಂದ ಇಬ್ಬರು ಉಗ್ರರು ಹತ್ಯೆ

ಅಕ್ಷರ ಗಾತ್ರ

ಶ್ರೀನಗರ: ಜಮ್ಮು– ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌–ಎ–ತಯಬಾದ (ಎಲ್‌ಇಟಿ) ಇಬ್ಬರು ಉಗ್ರರುಹತ್ಯೆಯಾಗಿದ್ದಾರೆಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್ಗಾಂನ ಮೀರ್ ಬಜಾರ್ ಪ್ರದೇಶದ ನವಾಪೋರಾದಲ್ಲಿ ಉಗ್ರರು ಅಡಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ಆ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

‘ಹತರಾದ ಇಬ್ಬರೂ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್‌–ಎ–ತಯಬಾಕ್ಕೆ ಸೇರಿದವರಾಗಿದ್ದಾರೆ’ ಎಂದು ಕಾಶ್ಮೀರ ವಲಯದ ಪೊಲೀಸ್‌ ಮುಖ್ಯಸ್ಥ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT