ಶ್ರೀನಗರ: ಜಮ್ಮು–ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

ಕಾರ್ಗಿಲ್‌ನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಕ್ಯಾಬ್ ಬುಧವಾರ ತಡರಾತ್ರಿ ಝೋಜಿಲಾದಲ್ಲಿ ರಸ್ತೆಯಿಂದ ಉರುಳಿ ಆಳವಾದ ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು, ಸೇನೆ ಮತ್ತು ಸ್ಥಳೀಯರು ಜೊತೆಯಾಗಿ ಕಾರ್ಯಾಚರಣೆ ಆರಂಭಿಸಿದ್ದು, ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉಳಿದ ಐವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.