ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ: ನಾಗರಿಕ ಬಲಿ, ಕಾರ್ಮಿಕನಿಗೆ ಗಾಯ

Last Updated 21 ಮಾರ್ಚ್ 2022, 15:28 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದಲ್ಲಿ ಸೋಮವಾರ ಎರಡು ಪ್ರತ್ಯೇಕ ಉಗ್ರರ ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರು ಮೃತಪಟ್ಟಿದ್ದು, ಬಿಹಾರದ ಕೂಲಿಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.

‘ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಗೋಟ್‌ಪೋರಾ ಪ್ರದೇಶದಲ್ಲಿ ತಮ್ಮ ಮನೆಯ ಬಳಿ ನಿಂತಿದ್ದ ನಾಗರಿಕರೊಬ್ಬರ ಮೇಲೆ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು. ಹತ್ಯೆಗೀಡಾದವರನ್ನು ತಜಮುಲ್‌–ಮೊಹಿದ್ದೀನ್‌ ರಾಥರ್‌ ಎಂದು ಗುರುತಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

‘ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಸೋಮವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಹಾರದ ಕೂಲಿಕಾರ್ಮಿಕ ಬಿಸುಜಿತ್‌ ಕುಮಾರ್‌ ಗಾಯಗೊಂಡಿದ್ದು, ಅವರನ್ನು ಪುಲ್ವಾಮ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಕಳೆದ ಒಂದು ತಿಂಗಳ ಅವಧಿಯಲ್ಲಿ ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ ಹೆಚ್ಚಾಗಿದ್ದು, ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಸೇರಿ ಹಲವು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT