ಶನಿವಾರ, ಸೆಪ್ಟೆಂಬರ್ 18, 2021
22 °C

ಜಮ್ಮು ಮೇಘ ಸ್ಫೋಟ: ಲೆಫ್ಟಿನೆಂಟ್ ಜರ್ನಲ್, ಡಿಜಿಪಿ ಜತೆ ಅಮಿತ್ ಶಾ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್‌ ಜಿಲ್ಲೆಯಲ್ಲಿ ಸಂಭವಿಸಿದ ಮೇಘ ಸ್ಫೋಟಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೆಫ್ಟಿನೆಂಟ್ ಕರ್ನಲ್ ಮನೋಜ್ ಸಿನ್ಹಾ ಮತ್ತು ಡಿಜಿಪಿ ದಿಲ್ಬಾಗ್ ಸಿಂಗ್ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಮೇಘ ಸ್ಫೋಟದ ಪರಿಣಾಮ ಐವರು ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ.

ಓದಿ: 

‘ಮೇಘ ಸ್ಫೋಟ ವಿಚಾರವಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಕರ್ನಲ್ ಮತ್ತು ಡಿಜಿಪಿ ಜತೆ ಮಾತುಕತೆ ನಡೆಸಿದ್ದೇನೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌), ಸೇನೆ ಮತ್ತು ಸ್ಥಳೀಯಾಡಳಿತ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಸಹ ಸ್ಥಳಕ್ಕೆ ತಲುಪಲಿದೆ. ಎಷ್ಟು ಸಾಧ್ಯವೋ ಅಷ್ಟು ಜನರ ಜೀವ ರಕ್ಷಣೆಗೆ ನಮ್ಮ ಮೊದಲ ಆದ್ಯತೆ’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ, ಮೃತಪಟ್ಟವರ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು