ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು- ಕಾಶ್ಮೀರ: ಪಾಂಪೋರ್ ಪಟ್ಟಣದ ಬಳಿ ಪೊಲೀಸ್ ಅಧಿಕಾರಿಯ ಶವ ಪತ್ತೆ

ಅಕ್ಷರ ಗಾತ್ರ

ಶ್ರೀನಗರ: ಜಮ್ಮು– ಕಾಶ್ಮೀರದ ಪಾಂಪೋರ್ ಪಟ್ಟಣದ ಬಳಿ ಪೊಲೀಸ್ ಅಧಿಕಾರಿಯೊಬ್ಬರ ಶವ ಶನಿವಾರ ಪತ್ತೆಯಾಗಿದೆ.

ಶವವಾಗಿ ಪತ್ತೆಯಾದ ಅಧಿಕಾರಿಯನ್ನು ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ.

ಫಾರೂಕ್‌ ಎದೆಯ ಮೇಲೆ ಬುಲೆಟ್‌ ಗುರುತು ಇರುವುದು ಕಂಡುಬಂದಿದ್ದು, ಸಂಬೂರ ಗ್ರಾಮದ ಗದ್ದೆಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಫಾರೂಕ್‌ ಅವರು ಐಆರ್‌ಪಿ 23 ಬೆಟಾಲಿಯನ್‌ನಲ್ಲಿ ಸಬ್‌ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪಾಂಪೋರ್‌ನ ಲೆಥ್‌ಪೋರಾದಲ್ಲಿ ಅವರನ್ನು ನಿಯೋಜಿಸಲಾಗಿತ್ತು. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದ್ದು, ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT