ಜಮ್ಮು: 370ನೇ ವಿಧಿ ರದ್ದತಿ ಬಳಿಕ ಮೊದಲ ಚುನಾವಣೆಗೆ ಭರದ ಸಿದ್ಧತೆ

ಶ್ರೀನಗರ/ ಜಮ್ಮು: ಭಾರತೀಯ ಸಂವಿಧಾನದ 370ನೇ ವಿಧಿ ರದ್ದತಿ ಬಳಿಕ ಮೊದಲ ಬಾರಿಗೆ ನಡೆಯುತ್ತಿರುವ ಚುನಾವಣೆಗೆ ಜಮ್ಮು, ಕಾಶ್ಮೀರದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು, ಮತದಾರರ ಓಲೈಕೆಗೆ ರಾಜಕಾರಣಿಗಳು ಕಸರತ್ತು ನಡೆಸುತ್ತಿದ್ದಾರೆ.
ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯು ಇದೇ ಮೊದಲ ಬಾರಿಗೆ ನವೆಂಬರ್ 28 ರಿಂದ ಡಿಸೆಂಬರ್ 22 ರವರೆಗೆ ನಡೆಯಲಿದೆ. 20 ಜಿಲ್ಲೆಗಳಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, 280 ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ.
ಚುನಾಯಿತ ಸರ್ಕಾರದ ಅನುಪಸ್ಥಿತಿಯಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಮಂಡಳಿಗಳು ಈ ಪ್ರದೇಶದಲ್ಲಿ ಹೊಸ ಆಡಳಿತ ವ್ಯವಸ್ಥೆಯಾಗಲು ಸಜ್ಜಾಗಿವೆ.
ಡಿಡಿಸಿ ಚುನಾವಣೆಯ ಜೊತೆಗೆ ಎಂಟು ಹಂತಗಳಲ್ಲಿ 230 ನಗರ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಉಪಚುನಾವಣೆಯೂ ನಡೆಯಲಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.