ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: 18.52 ಲಕ್ಷ ಜನರಿಗೆ ವಾಸ ದೃಢೀಕರಣ ಪತ್ರ ವಿತರಣೆ

Last Updated 22 ಸೆಪ್ಟೆಂಬರ್ 2020, 7:01 IST
ಅಕ್ಷರ ಗಾತ್ರ

ಜಮ್ಮು:ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈವರೆಗೆ ಸ್ವೀಕರಿಸಿದ 21.99 ಲಕ್ಷಕ್ಕೂ ಹೆಚ್ಚು ಅರ್ಜಿಗಳಲ್ಲಿ18.52 ಲಕ್ಷ ಜನರಿಗೆ ವಾಸ ದೃಢೀಕರಣ ಪ್ರಮಾಣಪತ್ರಗಳನ್ನು (ಡಿಸಿ) ವಿತರಿಸಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದ 20 ಜಿಲ್ಲೆಗಳ ಒಟ್ಟು 21.99 ಲಕ್ಷ ಜನರು ವಾಸ ದೃಢೀಕರಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 20.87 ಲಕ್ಷದ ಅರ್ಜಿಗಳು ಸರಿಯಾದ ದಾಖಲೆಗಳನ್ನು ಹೊಂದಿದ್ದವು. ಇನ್ನುಳಿದ ಅರ್ಜಿಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿದೆ ಎಂದು ಅವರು ಹೇಳಿದರು.

ಸೋಮವಾರದ ತನಕ 18.52 ಲಕ್ಷ ಜನರಿಗೆ ಪ್ರಮಾಣಪತ್ರವನ್ನು ನೀಡಲಾಗಿದೆ. ಇನ್ನುಳಿದ ಅರ್ಜಿಗಳ ಪ್ರಕ್ರಿಯೆ ಮುಂದುವರಿದಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT