ಕಾಶ್ಮೀರದ ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಒಂಬತ್ತು ನಾಗರಿಕರಿಗೆ ಗಾಯ

ಶ್ರೀನಗರ: ಇಲ್ಲಿನ ನಿಶಾತ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಒಂಬತ್ತು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಲ್ ಸರೋವರದ ದಡದಲ್ಲಿರುವ ಪ್ರಸಿದ್ಧ ಮೊಘಲ್ ಉದ್ಯಾನದ ಬಳಿ ದಾಳಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾನುವಾರ ನಡೆದ ಘಟನೆಯಲ್ಲಿ ಒಂಬತ್ತು ನಾಗರಿಕರು ಗಾಯಗೊಂಡಿದ್ದಾರೆ.
ಅವರಲ್ಲಿ ಏಳು ಮಂದಿಯನ್ನು ಎಸ್ಎಂಎಚ್ಎಸ್ ಆಸ್ಪತ್ರೆಗೆ ಮತ್ತು ಇನ್ನಿಬ್ಬರನ್ನು ಎಸ್ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.