ಶನಿವಾರ, ಸೆಪ್ಟೆಂಬರ್ 25, 2021
25 °C

ಜಮ್ಮು- ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಬಿಜೆಪಿ ಯತ್ನ: ರಾಹುಲ್ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು- ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಬಿಜೆಪಿ- ಆರ್‌ಎಸ್‌ಎಸ್‌ ಯತ್ನಿಸುತ್ತಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದಾಗಲೆಲ್ಲಾ ನಾನು ನನ್ನ ಮನೆಗೆ ಬಂದಂತೆ ಭಾಸವಾಗುತ್ತದೆ. ಈ ಕಣಿವೆಯೊಂದಿಗೆ ನನ್ನ ಕುಟುಂಬವು ದೀರ್ಘ ಸಂಬಂಧ ಹೊಂದಿದೆ' ಎಂದು ತಿಳಿಸಿದ್ದಾರೆ. 

ಇದೇ ವೇಳೆ ಬಿಜೆಪಿ- ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದಿರುವ ರಾಹುಲ್‌, 'ಜಮ್ಮು- ಕಾಶ್ಮೀರವು ಸಂಯೋಜಿತ ಸಂಸ್ಕೃತಿಯನ್ನು ಹೊಂದಿದೆ. ಇದನ್ನು ಒಡೆಯಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆಗಳು ಯತ್ನಿಸುತ್ತಿವೆ' ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್‌ ಗಾಂಧಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು