ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಇಬ್ಬರು ಉಗ್ರರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಅಕ್ಷರ ಗಾತ್ರ

ಜಮ್ಮು: ಇಲ್ಲಿನ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಲಷ್ಕರ್‌–ಎ–ತಯಬಾ (ಎಲ್‌ಇಟಿ) ಭಯೋತ್ಪಾದಕರನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆಡ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯ ನಿವಾಸಿಯಾಗಿರುವ ಎಲ್‌ಇಟಿ ಕಮಾಂಡರ್ ತಾಲಿಬ್ ಹುಸೇನ್ ಮತ್ತು ಪುಲ್ವಾಮಾ ಜಿಲ್ಲೆಯ ಫೈಝಲ್ ಅಹ್ಮದ್ ದಾರ್‌ ತುಕ್ಸಾನ್ ಗ್ರಾಮದಲ್ಲಿ ಸೆರೆಸಿಕ್ಕ ಭಯೋತ್ಪಾದಕರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆರೆಸಿಕ್ಕ ಉಗ್ರರಿಂದ ಎರಡು ಎ.ಕೆ ಅಸಾಲ್ಟ್ ರೈಫಲ್‌ಗಳು, ಏಳು ಗ್ರೆನೇಡ್‌ಗಳು ಮತ್ತು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT