ಮಂಗಳವಾರ, ಮಾರ್ಚ್ 21, 2023
28 °C

ಭದ್ರತೆ ಒದಗಿಸದ ಸರ್ಕಾರ: ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ ಕೆಲಕಾಲ ಸ್ಥಗಿತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನದೆದೆಹಲಿ: ಕಾಶ್ಮೀರದ ಬನಿಹಾಲ್‌ನಲ್ಲಿ ಭದ್ರತಾ ಲೋಪದಿಂದಾಗಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. 

ಭದ್ರತಾ ಲೋಪದಿಂದಾಗಿ ಯಾತ್ರೆಯನ್ನು 20 ನಿಮಿಷ ಸ್ಥಗಿತಗೊಳಿಸಲಾಗಿತ್ತು. ಬಳಿಕ ಯಾತ್ರೆ ಮತ್ತೆ ಆರಂಭಿಸಲಾಯಿತು ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. 
 
ಭಾರತ್ ಜೋಡೊ ಯಾತ್ರೆಗೆ ಭದ್ರತೆ ಒದಗಿಸಲು ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಜಮ್ಮು –ಕಾಶ್ಮೀರದ  ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಜ.19ರಂದು ಕಾಶ್ಮೀರಕ್ಕೆ ಪ್ರವೇಶಿಸಿತ್ತು. ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು