ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪಾಸಿಟಿವಿಟಿ ದರ ಹೆಚ್ಚಳ: ಜಮ್ಮುವಿನಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

Last Updated 17 ನವೆಂಬರ್ 2021, 6:23 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ನಗರದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಹೆಚ್ಚಾಗುತ್ತಿರುವ ಕಾರಣ ಬುಧವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಜಿಲ್ಲಾಧಿಕಾರಿ ಅನ್ಶುಲ್ ಗಾರ್ಗ್‌ ಟ್ವೀಟ್‌ ಮಾಡಿದ್ದಾರೆ.

’ಜಮ್ಮುವಿನಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಇಂದಿನಿಂದ (ನ.17) ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ವಿಧಿಸುತ್ತಿರುವುದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ನಾಗರಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಹೇಳಿದ್ದಾರೆ.

ಕೋವಿಡ್ ಸಂಬಂಧಿ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಮಂಗಳವಾರ ಎಚ್ಚರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT