ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್‌ಶೆಡ್‌ಪುರದಲ್ಲಿ ಸಾಮೂಹಿಕ ಅತ್ಯಾಚಾರ, ಐವರು ಆರೋಪಿಗಳ ಬಂಧನ

Last Updated 10 ಅಕ್ಟೋಬರ್ 2020, 7:33 IST
ಅಕ್ಷರ ಗಾತ್ರ

ಜಾರ್ಖಂಡ್‌: ಜಮ್‌ಶೆಡ್‌ಪುರದಲ್ಲಿ ನಡೆದ 17 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಬಾಗ್‌ಬೆರಾ ಪ್ರದೇಶದಲ್ಲಿ ಬಾಲಕಿ ತನ್ನ ಗೆಳೆಯನೊಂದಿಗೆ ಮನೆ ಬಳಿ ಮಾತನಾಡುತ್ತಿದ್ದ ವೇಳೆ ಆರೋಪಿಗಳು ಇಬ್ಬರನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ್ದಾರೆ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ತಮಿಳ್‌ ವನನ್‌ ತಿಳಿಸಿದ್ದಾರೆ.

ಗೆಳೆಯನನ್ನು ಕಟ್ಟಿಹಾಕಿ ಆತನ ಎದುರಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಟಿ.ಯು.ಶಂಕರ್‌, ರೋಷನ್‌ ಕುಜೂರ್‌, ಸೂರಜ್‌ ಪತ್ರೋ ಮತ್ತು ಸನ್ನಿ ಸೊರೆನ್‌ ಎಂದು ಗುರುತಿಸಲಾಗಿದ್ದು, ಅವರಿಂದ ಎರಡು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT