ಬುಧವಾರ, ಸೆಪ್ಟೆಂಬರ್ 30, 2020
23 °C

ರಾಷ್ಟ್ರಪತಿ ಭವನದಲ್ಲಿ ಕೆಲಸಕ್ಕಿದ್ದ ಯೋಧ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರ‍‍ಪತಿ ಭವನದಲ್ಲಿ ಕೆಲಸಕ್ಕಿದ್ದ  40 ವರ್ಷದ ಯೋಧರೊಬ್ಬರು ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್‌ಗೆ ಸೇರಿದ  ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಪೊಲೀಸರು ತಿಳಿಸಿದರು.

ನೇಪಾಳದ ತಿಹಾಯನ್‌ ನಿವಾಸಿ ಟೆಕ್ ಬಹದ್ದೂರ್ ಥಾಪಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗಳನ್ನು ನಡೆಸುತ್ತಿದೆ ಎಂದು ನವದೆಹಲಿಯ ಹೆಚ್ಚುವರಿ ಪೊಲೀಸ್‌ ಉಪ ಆಯುಕ್ತ ದೀಪಕ್‌ ಯಾದವ್‌ ಅವರು ತಿಳಿಸಿದರು. 

ಮುಂಜಾನೆ 3.30 ರ ಸುಮಾರಿಗೆ ಟೆಕ್‌ ಬಹದ್ದೂರ್‌ ಅವರು ಫ್ಯಾನ್ಸ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಅವರು ಸಹದ್ಯೋಗಿ ಗಮನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಅವರು ಮಾಹಿತಿ ನೀಡಿದರು. 

ಯೋಧ ತೀವ್ರ ಬೆನ್ನು ನೋವು ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ದೀಪಕ್‌ ಅವರು ಹೇಳಿದರು.

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು