ಭಾನುವಾರ, ನವೆಂಬರ್ 27, 2022
25 °C
ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ವಿರುದ್ಧ ಆರೋಪ

ಪ್ರಶಾಂತ್ ಕಿಶೋರ್ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದರು: ಜೆಡಿಯು ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

DH FILE

ಪಾಟ್ನಾ: ಜೆಡಿಯು ಮಾಜಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಪಿಸಿದ್ದಾರೆ.

ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಅವರು ಕೂಡ ಪ್ರಶಾಂತ್ ಕಿಶೋರ್ ವಿರುದ್ಧ ಆರೋಪ ಮಾಡಿದ್ದು, ಬಿಹಾರದಲ್ಲಿ ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದಿದ್ದಾರೆ.

ನಿತೀಶ್ ಕುಮಾರ್ ಆಡಳಿತದಲ್ಲಿ ಬಿಹಾರದಲ್ಲಿ ಏನೆಲ್ಲಾ ಕೆಲಸಗಳಾಗಿವೆ ಮತ್ತು ಅಭಿವೃದ್ಧಿ ನಡೆದಿದೆ ಎನ್ನುವುದು ಜನರಿಗೆ ಗೊತ್ತಿದೆ. ಆ ಬಗ್ಗೆ ಪ್ರಶಾಂತ್ ಕಿಶೋರ್ ಅವರ ಪ್ರಮಾಣಪತ್ರ ನಮಗೆ ಬೇಕಿಲ್ಲ ಎಂದು ರಾಜೀವ್ ಸಿಂಗ್ ಹೇಳಿದ್ದಾರೆ.

ಕಿಶೋರ್ ಅವರು ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ಅದಕ್ಕವರು ಯಾವ ಹೆಸರು ಬೇಕಾದರೂ ಕೊಡಬಹುದು. ಆದರೆ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜೀವ್ ಸಿಂಗ್ ಟೀಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು