ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಜೆಪಿ ವಿರುದ್ಧದ ನಿಲುವು ಸ್ಪಷ್ಪಡಿಸಲು ಬಿಜೆಪಿಗೆ ಜೆಡಿಯು ಆಗ್ರಹ: ವರದಿ

Last Updated 18 ಅಕ್ಟೋಬರ್ 2020, 8:01 IST
ಅಕ್ಷರ ಗಾತ್ರ

ಪಟ್ನಾ: ಎಲ್‌ಜೆಪಿ ಮತ್ತು ಆ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಕುರಿತ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಹಾರ ಮುಖ್ಯಮಂತ್ರಿನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷವು ಬಿಜೆಪಿಯನ್ನು ಒತ್ತಾಯಿಸಿದೆ ಎಂದು ವರದಿಯಾಗಿದೆ.

ಜೆಡಿಯು ತಮ್ಮ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿತ್ತು ಎಂದು ಈ ಹಿಂದೆಯೇ ಆರೋಪಿಸಿರುವ ಚಿರಾಗ್ ಪಾಸ್ವಾನ್, ತಂದೆ ದಿ. ರಾಮ್‌ವಿಲಾಸ್ ಪಾಸ್ವಾನ್‌ಗೆ ನಿತೀಶ್ ಕುಮಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಬಿಹಾರ ಚುನಾವಣೆಯಲ್ಲಿ ಜೆಡಿಯು ಜತೆ ಸ್ಪರ್ಧಿಸುವುದಿಲ್ಲ ಎಂದೂ ಘೋಷಿಸಿದ್ದರು. ಆದರೆ, ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಬಿಜೆಪಿಯುು ಜೆಡಿಯು ಜತೆಗೆ ಮೈತ್ರಿ ಮುಂದುವರಿಸಿದ್ದು, ಚಿರಾಗ್‌ ವಿಚಾರದಲ್ಲಿ ಮೌನ ತಾಳಿದೆ. ಹೀಗಾಗಿ, ಎಲ್‌ಜೆಪಿ ವಿಚಾರದಲ್ಲಿ ಬಿಜೆಪಿಯು ನಿಲುವು ಸ್ಪಷ್ಟಪಡಿಸಬೇಕು ಎಂದು ಜೆಡಿಯು ಆಗ್ರಹಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಜೆಡಿಯು ವಿರುದ್ಧ ಶನಿವಾರವೂ ಆಕ್ರೋಶ ವ್ಯಕ್ತಪಡಿಸಿದ್ದ ಚಿರಾಗ್, ನಿತೀಶ್ ಕುಮಾರ್ ಅವರು ಮತ್ತೆ ಬಿಹಾರದ ಮುಖ್ಯಮಂತ್ರಿಯಾದರೆ ಎನ್‌ಡಿಎ ಮೈತ್ರಿಕೂಟ ತೊರೆಯುವುದಾಗಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT