ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ

Last Updated 8 ಆಗಸ್ಟ್ 2022, 11:36 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಬಿಹಾರ ರಾಜಕೀಯಕ್ಕೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡುತ್ತಿರುವ ಮಧ್ಯೆಯೇ, ಎನ್‌ಡಿಎ ಮಿತ್ರ ಪಕ್ಷ ಜೆಡಿ(ಯು) ಅಧ್ಯಕ್ಷರು ಕಾಂಗ್ರೆಸ್ ಅಧ್ಯಕ್ಷೆ ಜತೆ ಮಾತುಕತೆ ನಡೆಸಿದ್ದಾರೆ.

ಮಾತುಕತೆ ವೇಳೆ ಯಾವೆಲ್ಲ ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂಬ ಮಾಹಿತಿ ಇನ್ನೂ ಅಧಿಕೃತವಾಗಿ ಹೊರಬಿದ್ದಿಲ್ಲ. ಆದಾಗ್ಯೂ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಬಗ್ಗೆ ಮಾತುಕತೆ ನಡೆದಿದೆ ಎಂದು ಮೂಲಗಳು ಹೇಳಿವೆ.

ನಿತೀಶ್, ಸೋನಿಯಾ ಮಾತುಕತೆ ಬೆನ್ನಲ್ಲೇ ಕಾಂಗ್ರೆಸ್‌ನ ಬಿಹಾರ ಘಟಕದ ಅಧ್ಯಕ್ಷ ಮದನ್ ಮೋಹನ್ ಝಾ ಹಾಗೂ ಶಾಸಕಾಂಗ ಪಕ್ಷದ ನಾಯಕ ಅಜಿತ್ ಶರ್ಮಾ ಶಾಸಕರ ಸಭೆ ಕರೆದಿದ್ದಾರೆ.

ಜೆಡಿ(ಯು) ಹಾಗೂ ಆರ್‌ಜೆಡಿ ಕೂಡ ಪಕ್ಷದ ಎಲ್ಲ ಶಾಸಕರು ಪಟ್ನಾಕ್ಕೆ ಬರಬೇಕೆಂದು ಸೂಚನೆ ನೀಡಿವೆ. ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಜೆಡಿ(ಯು) ಹಾಗೂ 11 ಗಂಟೆಗೆ ಆರ್‌ಜೆಡಿ ಶಾಸಕರ ಸಭೆ ಆಯೋಜಿಸಲಾಗಿದೆ.

ನಿತೀಶ್ ಕುಮಾರ್ ಅವರು ಎನ್‌ಡಿಎ ಮೈತ್ರಿಕೂಟ ತೊರೆದು ‘ಮಹಾಘಟಬಂಧನ 2.0’ ಆರಂಭಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಡಿವೆ.

ತೇಜಸ್ವಿ ಯಾದವ್ ಜತೆ ಮಾತುಕತೆ ನಂತರ ಸೋನಿಯಾಗೆ ಕರೆ

ನಿತೀಶ್ ಕುಮಾರ್ ಅವರು ಈಗಾಗಲೇ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜತೆ ಎರಡು ಬಾರಿ ಸಭೆ ನಡೆಸಿದ್ದಾರೆ. ಅದಾದ ಬಳಿಕವೇ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಬಿಹಾರದಲ್ಲಿ ಜೆಡಿ(ಯು) ಪಕ್ಷಕ್ಕೆ ಆರ್‌.ಸಿ.ಪಿ. ಸಿಂಗ್‌ ರಾಜೀನಾಮೆ ಸಲ್ಲಿಸಿದ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಾಗಿವೆ. ಸದ್ಯ ಜೆಡಿ(ಯು) ಕೇಂದ್ರ ಸಚಿವ ಸಂಪುಟದಿಂದ ಹೊರಗಿದೆ. ಆರ್‌.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ ನಂತರ ಯಾವುದೇ ಪ್ರಾತಿನಿಧ್ಯವಿಲ್ಲದೆ ಉಳಿದಿರುವ ಕೇಂದ್ರ ಸಚಿವ ಸಂಪುಟವನ್ನು ಸೇರುವುದಿಲ್ಲ ಜೆಡಿ(ಯು) ಪಕ್ಷವು ಭಾನುವಾರ ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT