ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಎನ್‌ಡಿಎ ಮೈತ್ರಿಕೂಟವನ್ನು ತೊರೆದಿದ್ದು: ತೇಜಸ್ವಿ

Last Updated 25 ಸೆಪ್ಟೆಂಬರ್ 2022, 12:55 IST
ಅಕ್ಷರ ಗಾತ್ರ

ಫತೇಹಾಬಾದ್(ಹರಿಯಾಣ): ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಜೆಡಿಯು, ಎಸ್‌ಎಡಿ ಮತ್ತು ಶಿವಸೇನೆ ಪಕ್ಷಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತೊರೆದಿವೆ ಎಂದು ಬಿಹಾರದ ಉಪಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.

ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ನಡೆದ ಐಎನ್‌ಎಲ್‌ಡಿ ರಾಲಿ ಉದ್ದೇಶಿಸಿ ಮಾತನಾಡಿದ ಅವರು, ಸುಳ್ಳು ಭರವಸೆಗಳನ್ನು ನೀಡುವ ಬಿಜೆಪಿಮಹಾನ್ ಸುಳ್ಳುಗಾರರ ಪಕ್ಷ ಎಂದು ಟೀಕಿಸಿದರು.

ಬಿಹಾರದ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಶಿರೋಮಣಿ ಅಕಾಲಿದಳದ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ಶಿವಸೇನಾ ಸಂಸದ ಅರವಿಂದ ಸಾವಂತ್ ವೇದಿಕೆಯಲ್ಲಿ ಹಾಜರಿದ್ದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಅವರು ಮೈತ್ರಿಕೂಟವನ್ನು ತೊರೆದಿದ್ದಾರೆ. ಈಗ ಎನ್‌ಡಿಎ ಎಲ್ಲಿದೆ ಎಂದು ಪ್ರಶ್ನಿಸಿದರು.

ಬಿಹಾರದ ಸರ್ಕಾರವು ಜನರಿಗೆ ಉದ್ಯೋಗ ನೀಡಲು ಆರಂಭಿಸಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT