ಶನಿವಾರ, ಮೇ 28, 2022
30 °C

ಜೆಇಇ (ಮೇನ್) ನಾಲ್ಕನೇ ಎಡಿಷನ್ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಂಜಿನಿಯರ್ ಪ್ರವೇಶಕ್ಕಾಗಿ ನಡೆಸುವ ಜೆಇಇ (ಮೇನ್) ನಾಲ್ಕನೇ ಎಡಿಷನ್ ಪರೀಕ್ಷೆಯು ಆಗಸ್ಟ್ 26ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ತಿಳಿಸಿದ್ದಾರೆ.

ಇದರೊಂದಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ಒಂದು ತಿಂಗಳ ಹೆಚ್ಚುವರಿ ಅವಧಿ ಸಿಗಲಿದೆ.

ಇದನ್ನೂ ಓದಿ: 

ಈ ಮೊದಲು ಜೆಇಇ (ಮೇನ್) ನಾಲ್ಕನೇ ಆವೃತ್ತಿಯ ಪರೀಕ್ಷೆ ಜುಲೈ 27ರಿಂದ ಆಗಸ್ಟ್ 2ರ ವರೆಗೆ ನಿಗದಿಯಾಗಿತ್ತು. ಇದನ್ನೀಗ ಮುಂದೂಡಲಾಗಿದೆ.

 

 

 

ವಿದ್ಯಾರ್ಥಿಗಳಿಂದ ನಿರಂತರ ಕೋರಿಕೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಜೆಇಇ (ಮೇನ್) ಮೂರನೇ ಹಾಗೂ ನಾಲ್ಕನೇ ಸೆಷನ್ ನಡುವೆ ಒಂದು ತಿಂಗಳ ಅಂತರ ಕಾಪಾಡಿಕೊಳ್ಳಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ಸೂಚಿಸಲಾಗಿದೆ.

ಜೆಇಇ (ಮೇನ್) ನಾಲ್ಕನೇ ಎಡಿಷನ್ ಪರೀಕ್ಷೆಗಳು ಆಗಸ್ಟ್ 26, 27, 31 ಮತ್ತು ಸೆಪ್ಟೆಂಬರ್ 2ರಂದು ನಡೆಯಲಿದೆ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.

 

 

 

 

ಒಟ್ಟು 7.32 ಲಕ್ಷ ವಿದ್ಯಾರ್ಥಿಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಪ್ರಕ್ರಿಯೆ ಈಗಲೂ ಜಾರಿಯಲ್ಲಿದ್ದು, ಜುಲೈ 20ರ ವರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು