ಶನಿವಾರ, ಮೇ 15, 2021
24 °C

ಕೋವಿಡ್‌ ಹೆಚ್ಚಳ: ಜೆಇಇ (ಮೇನ್‌) ಪರೀಕ್ಷೆ ಮುಂದೂಡಿಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 27–30ಕ್ಕೆ ನಿಗದಿಯಾಗಿದ್ದ  ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆ ಜೆಇಇ (ಮೇನ್‌)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಭಾನುವಾರ ತಿಳಿಸಿದ್ದಾರೆ.

‘ಈಗಿನ ಕೋವಿಡ್‌–19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್‌ 2021ರ ಜೆಇಇ ಮೇನ್‌ ‍ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ’ ಎಂದು ರಮೇಶ್‌ ಪೋಖ್ರಿಯಾಲ್‌ ಅವರು ಟ್ವೀಟ್‌ ಮಾಡಿದ್ದಾರೆ.

‘ಪ್ರಸ್ತುತ ಕೋವಿಡ್‌ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಜೆಇಇ(ಮೇನ್‌) ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದು ಎನ್‌ಟಿಎ ಸಹ ಅಧಿಕೃತ ಆದೇಶ ಹೊರಡಿಸಿದೆ.

‘ಪರಿಷ್ಕೃತ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕನಿಷ್ಠಪಕ್ಷ ಪರೀಕ್ಷೆಗಿಂತ 15 ದಿನ ಮುಂಚಿತವಾಗಿ ದಿನಾಂಕವನ್ನು ತಿಳಿಸಲಾಗುವುದು’ ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು