ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಭದ್ರತೆ, ಮುಂಜಾಗ್ರತೆಯೊಂದಿಗೆ ಜೆಇಇ ಪರೀಕ್ಷೆ

Last Updated 1 ಸೆಪ್ಟೆಂಬರ್ 2020, 9:24 IST
ಅಕ್ಷರ ಗಾತ್ರ

ನವದೆಹಲಿ: ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಮಂಗಳವಾರ ಜೆಇಇ- ಮುಖ್ಯ ಪರೀಕ್ಷೆಯನ್ನು ಕೋವಿಡ್-19ರ ಕಾರಣಕ್ಕೆ ಅಗತ್ಯ ಮುಂಜಾಗ್ರತೆಯೊಂದಿಗೆ ನಡೆಸಲಾಯಿತು.

ಅಭ್ಯರ್ಥಿಗಳ ಪ್ರವೇಶ ಮತ್ತು ನಿರ್ಗಮನದ ವೇಳೆ ತಪಾಸಣೆ ನಡೆಯಿತು. ಮಾಸ್ಕ್ ಗಳನ್ನು ವಿತರಿಸಲಾಯಿತು. ಅಭ್ಯರ್ಥಿಗಳು ಪರಸ್ಪರ ಅಂತರ ಕಾಯ್ದುಕೊಂಡಿದ್ದುದು ಪರೀಕ್ಷಾ ಕೇಂದ್ರಗಳ ಬಳಿ ಸಾಮಾನ್ಯ ದೃಶ್ಯವಾಗಿತ್ತು.

ಕೋವಿಡ್-19 ಕಾರಣದಿಂದ ಈ ಹಿಂದೆ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರವೇಶದ್ವಾರಗಳಲ್ಲಿ ಸ್ಯಾನಿಟೈಸರ್ ಒದಗಿಸಲಾಗಿತ್ತು. ಪ್ರವೇಶ ಪತ್ರಗಳ ತಪಾಸಣೆಗೆ ಬಾರ್ ಕೋಡ್ ವ್ಯವಸ್ಥೆ ಜಾರಿ ಮಾಡಲಾಗಿತ್ತು ಎಂದು ಎನ್.ಟಿ.ಎ ಅಧಿಕಾರಿಗಳು ತಿಳಿಸಿದರು.

ಮಾಸ್ಕ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಿದ್ದರೂ, ಒಮ್ಮೆ ಕೊಠಡಿ ಪ್ರವೇಶಿಸಿದ ಬಳಿಕ ಪರೀಕ್ಷಾ ಮೇಲ್ವಿಚಾರಣೆ ಅಧಿಕಾರಿಗಳು ಒದಗಿಸಿದ ಮಾಸ್ಕ್ ಅನ್ನು ಅಭ್ಯರ್ಥಿಗಳು ಧರಿಸಬೇಕಾಗಿತ್ತು. ಬೆಳಗಿನ ಅವಧಿಯ ಪರೀಕ್ಷೆ 9.30 ಗಂಟೆಗೆ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದರು.

ಪರೀಕ್ಷೆ ಆರಂಭಕ್ಕೂ ಮೊದಲು ಮತ್ತು ಅಂತ್ಯವಾದ ನಂತರವೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಯಿತು. ಒಟ್ಟಾರೆ 9 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT