ಮಂಗಳವಾರ, ಮೇ 18, 2021
23 °C

ಜೆಇಇ–ನೀಟ್: ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕು ಎಂದ ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ‘17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ ಮತ್ತು ನೀಟ್‌ ಪರೀಕ್ಷೆಗಳ ಪ್ರವೇಶ ಪತ್ರವನ್ನು ಈಗಾಗಲೇ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಏನೇ ಆದರೂ ಪರೀಕ್ಷೆಗಳನ್ನು ಬರೆಯುತ್ತೇವೆ ಎಂದು ಅವರು ಸಿದ್ಧರಾಗಿರುವುದನ್ನು ಇದು ತೋರಿಸುತ್ತದೆ. ಪರೀಕ್ಷೆಗಳನ್ನು ಪೂರ್ವ ನಿಗದಿಯಂತೇ ನಡೆಸುತ್ತೇವೆ’ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಗುರುವಾರ ಹೇಳಿದ್ದಾರೆ.

ಈ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಗುರುವಾರವೂ ಮುಂದುವರಿದಿದೆ. ಸೆಪ್ಟೆಂಬರ್‌ನಲ್ಲೇ ಪರೀಕ್ಷೆಗಳನ್ನು ನಡೆಸುವಂತೆ 150 ಶಿಕ್ಷಣ ತಜ್ಞರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

‘ಜೆಇಇ ಪರೀಕ್ಷೆ ತೆಗೆದುಕೊಂಡಿರುವವರಲ್ಲಿ 7 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ನೀಟ್ ಪರೀಕ್ಷೆ ತೆಗೆದುಕೊಂಡವರಲ್ಲಿ 10 ಲಕ್ಷದಷ್ಟು ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಪರೀಕ್ಷೆಗಳನ್ನು ಮುಂದೂಡಬೇಡಿ ಎಂದು ಹಲವು ವಿದ್ಯಾರ್ಥಿಗಳು ಮತ್ತು ಪೋಷಕರು ನನಗೆ, ನಮ್ಮ ಸಚಿವಾಲಯಕ್ಕೆ ಇ–ಮೇಲ್‌ ಮೂಲಕ ಮನವಿ ಮಾಡಿಕೊಂಡಿದ್ದಾರೆ’ ಎಂದು ರಮೇಶ್ ವಿವರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು