ಕುಲ್ಗಾಮ್-ಶೋಪಿಯಾನ್‌ನಲ್ಲಿ ಸಕ್ರಿಯನಾಗಿದ್ದ ಉಗ್ರನ ಕೊಂದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಪ್ರೆನ್ ಎಂಬಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸ್ ಇಲಾಖೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
‘ಭಯೋತ್ಪಾದಕ ಸಂಘಟನೆ ಜೆಇಎಮ್‌ನ ಒಬ್ಬ ಉಗ್ರನನ್ನು ಹೊಡೆದುರಳಿಸಲಾಗಿದೆ. ಉಗ್ರನನ್ನು ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಕಮ್ರಾನ್ ಭಾಯಿ ಹನೀಸ್ ಎಂದು ಗುರುತಿಸಲಾಗಿದೆ. ಇನ್ನೂ ಶೋಧ ನಡೆಯುತ್ತಿದೆ’ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
One FT of JeM #terror outfit killed, identified as Kamran Bhai @ Hanees who was active in #Kulgam-#Shopian area. Search is still going on: ADGP Kashmir@JmuKmrPolice https://t.co/v8P0CFkUrp
— Kashmir Zone Police (@KashmirPolice) November 11, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.