ಶುಕ್ರವಾರ, ಜುಲೈ 1, 2022
23 °C

ಕೋವಿಡ್‌: ಜಾರ್ಖಂಡ್‌ನಲ್ಲಿ ರಾಜ್ಯ ಪಠ್ಯಕ್ರಮದ 10, 12ನೇ ತರಗತಿ ಪರೀಕ್ಷೆ ರದ್ದು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ರಾಂಚಿ: ಕೋವಿಡ್‌ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ಜಾರ್ಖಂಡ್‌ನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಜೆಎಸಿ ಬೋರ್ಡ್ (10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

‘ಇದು ಕೋವಿಡ್‌ ಸಂಕಷ್ಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಯನ್ನು ಪರಿಗಣಿಸಿ ಜೆಸಿಎ ಬೋರ್ಡ್‌ನ 10 ಮತ್ತು 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.

ಗುಜರಾತ್‌, ರಾಜಸ್ಥಾನ, ಕರ್ನಾಟಕ, ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಈಗಾಗಲೇ ನಿರ್ಧರಿಸಿವೆ.

ಇದನ್ನೂ ಓದಿ... ಪ್ರಧಾನಿ ಮೋದಿ ದೇಶದ ಮತ್ತು ಬಿಜೆಪಿಯ ಉನ್ನತ ನಾಯಕ: ಸಂಜಯ್ ರಾವುತ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು