ಶುಕ್ರವಾರ, ಸೆಪ್ಟೆಂಬರ್ 24, 2021
23 °C

ನ್ಯಾಯಾಧೀಶರ ಹತ್ಯೆ: ವಾರಕ್ಕೊಮ್ಮೆ ವರದಿ ಸಲ್ಲಿಸಲು ಸಿಬಿಐಗೆ ‘ಸುಪ್ರೀಂ’ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಧನಬಾದ್‌ ನ್ಯಾಯಾಧೀಶರ ಹತ್ಯೆ ಬಗ್ಗೆ ಸಿಬಿಐ ತನಿಖೆಯಲ್ಲಿನ ಪ್ರಗತಿ ಬಗ್ಗೆ ಜಾರ್ಖಂಡ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರು ವಾರಕ್ಕೊಮ್ಮೆ ಮೇಲ್ವಿಚಾರಣೆ ನಡೆಸಲಿದ್ದಾರೆ’ ಎಂದು ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ.

‘ಈ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಪ್ರತಿ ವಾರ ವರದಿಯನ್ನು ಸಲ್ಲಿಸಬೇಕು. ಅದನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ‍ಪೀಠವು ಮೇಲ್ವಿಚಾರಣೆ ನಡೆಸಲಿದೆ’ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ವಿನೀತ್‌ ಶರಣ್‌, ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠವು ಸಿಬಿಐಗೆ ಸೂಚಿಸಿದೆ.

ಧನಬಾದ್‌ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಉತ್ತಮ್‌ ಆನಂದ್‌ ಅವರು ಜುಲೈ 28ರಂದು ಜಡ್ಜಸ್‌ ಕಾಲೊನಿ ಬಳಿ ವಾಯುವಿಹಾರಕ್ಕೆ ತೆರಳಿದ್ದಾಗ ವಾಹನ ಗುದ್ದಿಸಿ ಅವರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು