ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿ ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್

ರಾಂಚಿ: ದುಮ್ಕಾ ಖಜಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಮಂಜೂರು ಮಾಡಲು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಲಾಲೂ ಪ್ರಸಾದ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ತಿರಸ್ಕರಿಸಿದ್ದಾರೆ.
'ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಅವರು ತಮ್ಮ ಒಟ್ಟು ಶಿಕ್ಷೆಯ ಅರ್ಧದಷ್ಟು ಅವಧಿಯನ್ನು ಪೂರ್ಣಗೊಳಿಸಲು ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಆ ಕಾರಣಕ್ಕಾಗಿ ಜಾಮೀನು ಅರ್ಜಿಯನ್ನು ಮಾನ್ಯ ಮಾಡಲಾಗಿಲ್ಲ. ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸುವಂತೆ ಅವರಿಗೆ ಆದೇಶಿಸಲಾಗಿದೆ' ಎಂದು ನ್ಯಾಯಾಲಯ ತಿಳಿಸಿದೆ.
ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ಪೈಕಿ ಮೂರರಲ್ಲಿ ಲಾಲೂ ಪ್ರಸಾದ್ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.
ದುಮ್ಕಾ ಖಜಾನೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅವರಿಗೆ ಜಾಮೀನು ತಿರಸ್ಕರಿಸಲಾಗಿದೆ.
72 ವಯಸ್ಸಿನ ಲಾಲೂ ಪ್ರಸಾದ್ ಯಾದವ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.