ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಆರೋಗ್ಯ ಸಚಿವ ಗುಪ್ತ ಅವರಿಗೆ ಮತ್ತೆ ಕೋವಿಡ್‌ ದೃಢ

Last Updated 8 ಜನವರಿ 2022, 11:31 IST
ಅಕ್ಷರ ಗಾತ್ರ

ಜಮ್ಶೆಡ್‌ಪುರ: ಜಾರ್ಖಂಡ್‌ ಆರೋಗ್ಯ ಸಚಿವ ಬನ್ನ ಗುಪ್ತ ಅವರಿಗೆ ಎರಡನೇ ಬಾರಿಗೆ ಕೋವಿಡ್-19‌ ದೃಢಪಟ್ಟಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿ ಉಳಿದಿದ್ದಾರೆ.

2020ರ ಆಗಸ್ಟ್‌ನಲ್ಲಿ ಅವರಿಗೆ ಮೊದಲ ಸಲ ಸೋಂಕು ತಗುಲಿತ್ತು.

ʼನನಗೆ ಮತ್ತೊಮ್ಮೆ ಕೋವಿಡ್ ದೃಢಪಟ್ಟಿದ್ದು, ಕರ್ತವ್ಯದಿಂದ ಹೊರಗುಳಿಯಲಿದ್ದೇನೆ. ಕಳೆದ ಕೆಲವು ದಿನಗಳಿಂದ ನಾನು ಆರಾಮವಾಗಿ ಇರಲಿಲ್ಲ. ಹಾಗಾಗಿ ಪರೀಕ್ಷೆ ಮಾಡಿಸಿಕೊಂಡಿದ್ದು, ಸೋಂಕು ಇರುವುದಾಗಿವರದಿ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ತಪ್ಪದೆ ಪರೀಕ್ಷೆ ಮಾಡಿಸಿಕೊಳ್ಳಿ. ನಾನಾಗಿಯೇ ಪ್ರತ್ಯೇಕವಾಸದಲ್ಲಿ ಉಳಿದಿದ್ದೇನೆʼ ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಸಚಿವರು ಆರೋಗ್ಯವಾಗಿದ್ದು,ಜಮ್ಶೆಡ್‌ಪುರ ನಿವಾಸದಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT