ಶನಿವಾರ, ಮೇ 15, 2021
25 °C

ಮೇವು ಹಗರಣ: ಲಾಲು ಪ್ರಸಾದ್ ಯಾದವ್‌ಗೆ ಜಾಮೀನು ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್‌ನ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಶಿಕ್ಷೆಗೆ ಗುರಿಯಾಗಿದ್ದರು. ಮೂರರಲ್ಲಿ ಈಗಾಗಲೇ ಅವರು ಜಾಮೀನು ಪಡೆದಿದ್ದಾರೆ. ನಾಲ್ಕನೇ ಡುಮ್ಕಾ ಖಜಾನೆ ಪ್ರಕರಣದಲ್ಲೂ ಇದೀಗ ಲಾಲೂ ಅವರಿಗೆ  ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿರುವುದರಿಂದ ಅವರು ಜೈಲಿನಿಂದ ಹೊರಬರಲಿದ್ದಾರೆ.

ಡುಮ್ಕಾ ಖಜಾನೆಯಿಂದ ₹ 3.13 ಕೋಟಿ ಅಕ್ರಮವಾಗಿ ವಿಥ್ ಡ್ರಾ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಯಾದವ್ ಅವರಿಗೆ 7 ವರ್ಷ ಶಿಕ್ಷೆಯಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು