ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀನ್ಸ್ ಧರಿಸಬೇಡ ಎಂದಿದ್ದಕ್ಕೆ ಪತಿಯನ್ನೇ ಹತ್ಯೆಗೈದ ಪತ್ನಿ

Last Updated 19 ಜುಲೈ 2022, 5:01 IST
ಅಕ್ಷರ ಗಾತ್ರ

ಜಾರ್ಖಂಡ್: ಜೀನ್ಸ್ ಧರಿಸುವ ಸಂಬಂಧ ಉಂಟಾದ ಗಲಾಟೆಯಲ್ಲಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ಜಂತಾರ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಯುವತಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್‌ನ ಬುಡಕಟ್ಟು ಸಮುದಾಯಕ್ಕೆ ಸೇರಿದ ಯುವಕ ಮತ್ತು ಯುವತಿ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು.

ಯುವಕ ಆಂದೋಲನ್ ತುಡು (18) ತನ್ನ ಪತ್ನಿ ಪುಷ್ಪಾ ಹೆಂಬ್ರಮ್ (17)ಗೆ ಜೀನ್ಸ್ ಧರಿಸುವುದು ಬೇಡ ಎಂದು ಹೇಳಿದ್ದ. ಅಲ್ಲದೆ, ಮದುವೆಯಾದ ಯುವತಿ ಸಾಂಪ್ರದಾಯಿಕ ಉಡುಪು ಮಾತ್ರ ಧರಿಸಬೇಕು ಎಂದು ಒತ್ತಾಯಿಸುತ್ತಿದ್ದ. ಈ ವಿಚಾರವಾಗಿ ಅವರ ಮಧ್ಯೆ ಆಗಾಗ ಜಗಳವುಂಟಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪತ್ನಿ ಜೀನ್ಸ್ ಧರಿಸಿದ್ದನ್ನು ಆಕ್ಷೇಪಿಸಿದ್ದ ಆಂದೋಲನ್ ಮೇಲೆ ಪುಷ್ಪಾ ಬಿದಿರಿನ ದೊಣ್ಣೆಯಿಂದ ಹಲ್ಲೆ ನಡೆಸಿದ್ದಳು. ಅದಾದ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕ ಸಾವಿಗೀಡಾದ ಬಳಿಕ ಆತನ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ವಿಚಾರಣೆ ನಡೆಸಿ, ಪುಷ್ಪಾಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT