ಗುರುವಾರ , ಆಗಸ್ಟ್ 11, 2022
21 °C

ನಮ್ಮನ್ನು ರೈತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ: ಜಿಯೊ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಭಾರತಿ ಏರ್‌ಟೆಲ್‌ ಹಾಗೂ ವೊಡಾಫೋನ್‌ ಐಡಿಯಾ ಲಿಮಿಟೆಡ್‌ (ವಿಐಎಲ್‌) ಸಂಸ್ಥೆಯವರು ನಮ್ಮನ್ನು ರೈತ ವಿರೋಧಿ ಎಂದು ಬಿಂಬಿಸುವ ಕೀಳುಮಟ್ಟದ ಅಭಿಯಾನವೊಂದನ್ನು ಕೈಗೊಂಡಿದ್ದಾರೆ. ಜಿಯೊ ಸಂಖ್ಯೆಯನ್ನು ತಮ್ಮ ನೆಟ್‌ವರ್ಕ್‌ಗೆ ‘ಪೋರ್ಟ್‌’ ಮಾಡಿಕೊಂಡರೆ ಅದು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದಂತಾಗುತ್ತದೆ ಎಂದು ಪ್ರಚೋದಿಸುತ್ತಿದ್ದಾರೆ’ ಎಂದು ರಿಲಯನ್ಸ್‌ ಜಿಯೊ ಸೋಮವಾರ ಆರೋಪಿಸಿದೆ.

ಈ ಸಂಬಂಧ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ (ಟ್ರಾಯ್‌) ದೂರು ಸಲ್ಲಿಸಿರುವ ಜಿಯೊ, ಈ ಎರಡು ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಏರ್‌ಟೆಲ್‌ ಹಾಗೂ ವೊಡಾಫೋನ್‌ ಸಂಸ್ಥೆಗಳು ಜಿಯೊ ಆರೋಪವನ್ನು ಅಲ್ಲಗಳೆದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು