ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿ ಹಿಂಸೆ: ಫೋಟೊ ಬಿಡುಗಡೆ ಮಾಡಿ, ಆರೋಪಿಗಳ ಗುರುತಿಸಲು ಕರೆ ಕೊಟ್ಟ ಪೊಲೀಸರು

Last Updated 14 ಜೂನ್ 2022, 16:08 IST
ಅಕ್ಷರ ಗಾತ್ರ

ರಾಂಚಿ: ಜೂನ್‌ 10ರಂದು ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಶಾಮೀಲಾದವರ ಫೋಟೊಗಳನ್ನು ಜಾರ್ಖಂಡ್‌ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆರೋಪಿಗಳನ್ನು ಗುರುತಿಸಲು ಸಹಾಯ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.

ರಾಂಚಿ ಹಿಂಸಾಚಾರಕ್ಕೆ ಸಂಬಂಧಿಸಿ ರಾಜ್ಯಪಾಲ ರಮೇಶ್‌ ಬೈಸ್‌ ಅವರು ಡಿಜಿಪಿ ನೀರಜ್‌ ಸಿನ್ಹಾ ಮತ್ತು ಇತರ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿದ ಒಂದು ದಿನದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಇಬ್ಬರ ಹತ್ಯೆಯಾಗಿರುವ ಮತ್ತು ಹನ್ನೆರಡಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿಂಸಾಚಾರ ಘಟನೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮನ್ಸ್‌ನಲ್ಲಿ ಪ್ರಶ್ನಿಸಲಾಗಿತ್ತು.

ಹಿಂಸಾಚಾರದಲ್ಲಿ ಭಾಗಿಯಾದ ಸುಮಾರು 30 ಆರೋಪಿಗಳ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದೇವೆ. ಅವರನ್ನು ಗುರುತಿಸಲು ನಾಗರಿಕರು ಸಹಕರಿಸಬೇಕು. ಈಗಾಗಲೇ ಹಲವು ಶಂಕಿತರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT