ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ರೌಪದಿ ಮುರ್ಮುಗೆ ಬೆಂಬಲ ಸೂಚಿಸಿದ ಬೆನ್ನಲ್ಲೇ ಜಾರ್ಖಂಡ್ ಸಿ.ಎಂ–ಸಿನ್ಹಾ ಭೇಟಿ

ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ್ದ ಜೆಎಂಎಂ
Last Updated 16 ಜುಲೈ 2022, 15:18 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರವಷ್ಟೇ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬೆಂಬಲ ಘೋಷಿಸಿದೆ. ಆದರೆ, ವಿರೋಧಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಮುಖ್ಯಮಂತ್ರಿ ಹಾಗೂ ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿರುವ ವಿಷಯವು ಈಗ ಚರ್ಚೆಗೆ ಗ್ರಾಸವಾಗಿದೆ.

ಸಿನ್ಹಾ ಅವರ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ರಾಜಕೀಯದಲ್ಲಿ ಕಣ್ಣಿಗೆ ಕಾಣುವುದಕ್ಕಿಂತ ಹೆಚ್ಚಿನದು ಯಾವಾಗಲೂ ಇರುತ್ತದೆ. ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ರಾಷ್ಟ್ರಪತಿ ಚುನಾವಣೆಯ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಶನಿವಾರ ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿದ್ದಾರೆ’ ಎಂದು ಬರೆದು ಇಬ್ಬರ ಭೇಟಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ಜಾರ್ಖಂಡ್‌ನವರೇ ಆದ ಯಶವಂತ ಸಿನ್ಹಾ ಅವರು ಜೂನ್ 24ರಂದು ರಾಷ್ಟ್ರಪತಿ ಚುನಾವಣೆಯ ಪ್ರಚಾರ ಕಾರ್ಯ ಆರಂಭಿಸಬೇಕಿತ್ತು. ಆದರೆ, ಜೆಎಂಎಂ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದರಿಂದ ಅವರಿಗೆ ಬೆಂಬಲಿಸುವ ಕುರಿತು ಚಿಂತಿಸಿತ್ತು. ಈ ಕಾರಣಕ್ಕಾಗಿ ಸಿನ್ಹಾ ಪ್ರಚಾರದ ಕಾರ್ಯಸೂಚಿಯನ್ನು ಬದಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT