ನವದೆಹಲಿ: ದೇಶದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಮತ್ತು ಆಮದು ಮಾಡಿಕೊಂಡು ಬಳಸುವ ಕುರಿತಂತೆ ಅನುಮತಿ ಕೋರಿ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ ಎಂದು ಮೂಲಗಳು ಹೇಳಿವೆ.

ಈ ಕುರಿತಂತೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ತಜ್ಞರ ಸಮಿತಿ ಸಭೆ ಸೇರಿ ಅರ್ಜಿ ಕುರಿತು ನಿರ್ಧಾರ ಕೈಗೊಳ್ಳಲಿದೆ.

ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ, ಅಮೆರಿಕ, ಯುರೋಪ್, ಬ್ರಿಟನ್ ಮತ್ತು ಜಪಾನ್‌ನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ವಿದೇಶದ ಲಸಿಕೆ ಬಳಕೆಗೆ ಅನುಮತಿ ನೀಡಿದ ಬೆನ್ನಲ್ಲೇ, ಭಾರತ ಸರ್ಕಾರ ಕೂಡ ಲಸಿಕೆ ಕಾರ್ಯಕ್ರಮಕ್ಕೆ ವೇಗ ನೀಡಲು ನಿರ್ಧರಿಸಿದ್ದು, ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಲು ಮುಂದಾಗಿದೆ.

ನ್ಯೂ ಡ್ರಗ್ಸ್ ಆ್ಯಂಡ್ ಕ್ಲಿನಿಕಲ್ ಟ್ರಯಲ್ ರೂಲ್ಸ್ 2019ರ ಅನ್ವಯ ವಿಶೇಷ ಸಂದರ್ಭದಲ್ಲಿ ಲಸಿಕೆ ಮತ್ತು ಇತರ ಔಷಧಗಳ ತುರ್ತು ಬಳಕೆಗೆ ಸೂಕ್ತ ಅನುಮತಿಯನ್ನು ತ್ವರಿತವಾಗಿ ನೀಡಬಹುದಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

18 ದಾಟಿದ ಎಲ್ಲರಿಗೂ ಲಸಿಕೆ: ಮೋದಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಮೂಲಗಳ ಪ್ರಕಾರ, ಜಾನ್ಸನ್ ಆ್ಯಂಡ್ ಜಾನ್ಸನ್ ಏಪ್ರಿಲ್ 12ರಂದೇ ಸುಗಮ್ ಆನ್‌ಲೈನ್ ಪೋರ್ಟಲ್ ಮೂಲಕ ಲಸಿಕೆ ಬಳಕೆಗೆ ಅನುಮತಿ ಕೋರಿತ್ತು. ಆದರೆ ಕೆಲವೊಂದು ತಾಂತ್ರಿಕ ಅಡಚಣೆಗಳಿಂದಾಗಿ ಸೋಮವಾರ ಮತ್ತೆ ಅರ್ಜಿ ಸಲ್ಲಿಸಿದೆ ಎಂದು ಹೇಳಿದೆ.

ಸೋಂಕು ಹೆಚ್ಚಳ: ಕೋವಿಡ್ ಲಸಿಕೆ ಮೇಲಿನ ಆಮದು ಶುಲ್ಕ ರದ್ದುಪಡಿಸಲಿದೆ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.