ಬುಧವಾರ, ಸೆಪ್ಟೆಂಬರ್ 22, 2021
21 °C

ಭಾರತದಲ್ಲಿ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಜಾನ್ಸನ್ & ಜಾನ್ಸನ್ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಏಕ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಜಾನ್ಸನ್ & ಜಾನ್ಸನ್ ಕಂಪನಿ ಮನವಿ ಸಲ್ಲಿಸಿದೆ.

ಆಗಸ್ಟ್ 5ರಂದು ಮನವಿ ಸಲ್ಲಿಸಲಾಗಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಬಯಾಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ಭಾರತದಲ್ಲಿ ಮತ್ತು ಇತರ ದೇಶಗಳಲ್ಲಿ ಏಕ ಡೋಸ್‌ನ ಕೋವಿಡ್ ಲಸಿಕೆ ಪೂರೈಕೆ ಮಾಡುವುದು ಮಹತ್ವದ ಮೈಲಿಗಲ್ಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಏಕ ಡೋಸ್ ಕೋವಿಡ್ ಲಸಿಕೆ ನೀಡಲು ಬದ್ಧರಾಗಿದ್ದೇವೆ. ಈ ಕುರಿತು ಭಾರತ ಸರ್ಕಾರದ ಜತೆ ಮಾತುಕತೆ ನಡೆಯುತ್ತಿದೆ ಎಂದು ಈಗಾಗಲೇ ಕಂಪನಿ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು