ಶುಕ್ರವಾರ, ಮಾರ್ಚ್ 31, 2023
22 °C

ಜೋಶಿಮಠದಲ್ಲಿ ಭೂಕುಸಿತ: 863 ಕಟ್ಟಡಗಳಲ್ಲಿ ಬಿರುಕು, ಜಿಲ್ಲಾಡಳಿತದಿಂದ ಗುರುತು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚಮೋಲಿ (ಉತ್ತರಾಖಂಡ): ‘ಜೋಶಿಮಠ ಪಟ್ಟಣದಲ್ಲಿ ಉಂಟಾಗಿರುವ ಭೂಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿರುವ ಪ್ರದೇಶಗಳಿಗೆ ಚಮೋಲಿ ಜಿಲ್ಲಾಧಿಕಾರಿ ಹಿಮಾಂಶು ಖುರಾನ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಭೂಕುಸಿತದಿಂದಾಗಿ ಜೋಶಿಮಠ ಪಟ್ಟಣದ ವ್ಯಾಪ್ತಿಯಲ್ಲಿ 863 ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಪೈಕಿ 181 ಮನೆಗಳನ್ನು ಅಸುರಕ್ಷಿತ ಎಂದು ಜಿಲ್ಲಾಡಳಿತ ಗುರುತಿಸಿದೆ. 

ಉತ್ತರಾಖಂಡದ ಹಲವೆಡೆ ಕಳೆದ ಎರಡು ದಿನಗಳಿಂದ ಹಿಮಪಾತ ಮತ್ತು ಮಳೆ ಸುರಿದಿದ್ದರಿಂದ ತಾತ್ಕಾಲಿಕ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರ ಸಂಕಷ್ಟ ಮತ್ತಷ್ಟು ಹೆಚ್ಚಾಗಿತ್ತು.

‘ಕೆಟ್ಟ ಹವಾಮಾನದ ಹಿನ್ನೆಲೆಯಲ್ಲಿ ಜೋಶಿಮಠದ ಅಸುರಕ್ಷಿತ ಹೋಟೆಲ್‌ಗಳು ಮತ್ತು ಮನೆಗಳನ್ನು ಉರುಳಿಸುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು’ ಎಂದು ಖುರಾನ ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರನ್ನು ನಿಯೋಜಿಸುವ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. 

ಸಂತ್ರಸ್ತರ ಶಿಬಿರಗಳಿಗೆ ಭೇಟಿ ನೀಡಿ ನೊಂದವರ ಅಹವಾಲು ಆಲಿಸಿದ್ದೇನೆ. ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಖುರಾನ ತಿಳಿಸಿದ್ದಾರೆ.

 

ಇವನ್ನೂ ಓದಿ... 

ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿ, ಮೃತದೇಹ ಕತ್ತರಿಸಿ ಕಸದ ತೊಟ್ಟಿಗೆ ಎಸೆದ! 

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ ₹ 23 ಲಕ್ಷ ವಂಚನೆ ಮಾಡಿದವ ಮಂಗಳೂರಲ್ಲಿ ಬಂಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು