ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣ ನಿರ್ಬಂಧ: ದೆಹಲಿ ಹೈಕೋರ್ಟ್ ಮೊರೆ ಹೋದ ರಾಣಾ ಅಯೂಬ್

Last Updated 31 ಮಾರ್ಚ್ 2022, 10:24 IST
ಅಕ್ಷರ ಗಾತ್ರ

ನವದೆಹಲಿ: ವಿದೇಶ ಪ್ರಯಾಣಕ್ಕೆ ಜಾರಿ ನಿರ್ದೇಶನಾಲಯ (ಇಡಿ) ತಡೆ ಒಡ್ಡಿರುವುದನ್ನು ಪ್ರಶ್ನಿಸಿ ಪತ್ರಕರ್ತೆ ರಾಣಾ ಅಯೂಬ್ ಗುರುವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆನ್‌ಲೈನ್ ಮೂಲಕ ಸಂಗ್ರಹಿಸಿದ ಚಾರಿಟಿಯ ದೇಣಿಗೆ ಮೊತ್ತವನ್ನು ದುರುಪಯೋಗಪಡಿಸಿಕೊಂಡ ಆರೋಪ ರಾಣಾ ಅಯೂಬ್ ಮೇಲಿದೆ.

ಕೆಟ್ಟೋ.ಕಾಂ ಮೂಲಕ ಸಂಗ್ರಹವಾದ ₹1.77 ಕೋಟಿ ಮೊತ್ತವನ್ನು ರಾಣಾ ಅವರು ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಇಡಿ ಅಧಿಕಾರಿಗಳು, ಲಂಡನ್‌ಗೆ ತೆರಳಲು ಸಿದ್ಧವಾಗಿದ್ದ ರಾಣಾ ಅವರನ್ನು ತಡೆದಿದ್ದರು.

ಇದನ್ನು ಪ್ರಶ್ನಿಸಿ, ರಾಣಾ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.

ಶುಕ್ರವಾರ, ರಾಣಾ ಅರ್ಜಿಯ ವಿಚಾರಣೆ ನಡೆಯಲಿದೆ.

ಲಂಡನ್‌ನಲ್ಲಿ ಪತ್ರಿಕೋದ್ಯಮ ಉತ್ಸವಕ್ಕೆ ತೆರಳಲು ರಾಣಾ ಮುಂದಾಗಿದ್ದು, ಮುಂಬೈ ವಿಮಾನ ನಿಲ್ದಾಣಕ್ಕೆ ಹೋಗಿದ್ದಾಗ ಅವರಿಗೆ ಅಧಿಕಾರಿಗಳು ತಡೆ ಒಡ್ಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT