ಜೈಪುರ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ– ನ್ಯಾಯಾಧೀಶರ ಬಂಧನ

ಜೈಪುರ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಧೀಶ ಜಿತೇಂದ್ರ ಗುಲಿಯಾ ಅವರನ್ನು ಬಂಧಿಸಲಾಗಿದ್ದು, ಗುರುವಾರ ಭರತ್‌ಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರದಲ್ಲಿ ಬಂಧಿಸಲ್ಪಟ್ಟ ಗುಲಿಯಾ ಅವರನ್ನು ಭರತ್‌ಪುರಕ್ಕೆ ಕರೆತಂದು, ಅಲ್ಲಿನ ಆರ್‌ಬಿಎಂ ಆಸ್ಪತ್ರೆಯಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು.
14 ವರ್ಷದ ಸಂತ್ರಸ್ತ ಬಾಲಕ ಸಹ ಹೇಳಿಕೆ ನೀಡಲು ನ್ಯಾಯಾಲಯಕ್ಕೆ ತೆರಳಿದ್ದು, ಅನಾರೋಗ್ಯದ ಕಾರಣ, ಆತನನ್ನು ಆಸ್ಪತ್ರೆಗೆ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮತ್ತು ಎಸ್‌ಪಿ ದೇವೇಂದ್ರ ವಿಷ್ಣೋಯ್ ಅವರು ಸಂತ್ರಸ್ತನ ಮನೆಗೆ ಭೇಟಿ ನೀಡಿದ್ದರು.
ನ್ಯಾಯಾಧೀಶರ ಕುಟುಂಬದವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಬಾಲಕನ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ.
ಪ್ರಕರಣದ ತನಿಖಾಧಿಕಾರಿ ಸತೀಶ್ ವರ್ಮಾ ಅವರು ಜೈಪುರದಿಂದ ನ್ಯಾಯಾಧೀಶರನ್ನು ಬಂಧಿಸಿ ಭರತ್‌ಪುರಕ್ಕೆ ಕರೆತಂದಿದ್ದಾರೆ ಎಂದು ಎಸ್‌ಪಿ ದೇವೇಂದ್ರ ವಿಷ್ಣೋಯ್ ಹೇಳಿದ್ದಾರೆ.
ಈ ಮಧ್ಯೆ, ಬಾಲಕ ಮತ್ತು ಅವರ ಕುಟುಂಬಕ್ಕೆ ಸಲಹೆಗಾರರನ್ನು ನೇಮಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.