ಮಂಗಳವಾರ, ಜುಲೈ 27, 2021
24 °C

ನಂದಿಗ್ರಾಮ ಫಲಿತಾಂಶಕ್ಕೆ ಮಮತಾ ತಕರಾರು: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ತಕರಾರು ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಕೋಲ್ಕತ್ತ ಹೈಕೋರ್ಟ್ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಕೌಶಿಕ್‌ ಚಂದ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಆದರೆ, ನ್ಯಾಯಮೂರ್ತಿ ಕೌಶಿಕ್‌ ಚಂದ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ತಕರಾರು ಅರ್ಜಿಯ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ನ್ಯಾಯಮೂರ್ತಿಗಳು ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ನಮಗೆ ನ್ಯಾಯ ಸಿಗುವ ಭರವಸೆ ಇಲ್ಲವೆಂದು ಮಮತಾ ಹೇಳಿದ್ದಾರೆ. ಈ ವಿಚಾರವಾಗಿ ಹೈಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಮಮತಾ ಅವರ ಆರೋಪದ ಹಿನ್ನೆಲೆಯಲ್ಲಿ ತೀರ್ಪನ್ನು ಕಾಯ್ದಿರಿಸಲಾಗಿದೆ. ತೀರ್ಪು ಹೊರಬೀಳುವ ದಿನಾಂಕವನ್ನು ನ್ಯಾಯಪೀಠವು ಇನ್ನೂ ನಿಗದಿಪಡಿಸಿಲ್ಲ.

‘ಇವಿಎಂಗಳ ದುರ್ಬಳಕೆ ಮಾಡಲಾಗಿದೆ. ಮತಗಳ ಮರು ಎಣಿಕೆ ಮಾಡಬೇಕು ಎಂಬ ನನ್ನ ಮನವಿಯನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ’ ಎಂದು ಮಮತಾ ಬ್ಯಾನರ್ಜಿ ಅವರು ದೂರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು