ಬುಧವಾರ, ಅಕ್ಟೋಬರ್ 21, 2020
21 °C

ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ತನಿಖೆಗೆ ಮದ್ರಾಸ್ ಹೈಕೋರ್ಟ್ ಜಡ್ಜ್ ಒತ್ತಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Suriya

ಚೆನ್ನೈ: ನೀಟ್ ಪರೀಕ್ಷೆ ನಡೆಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ನಟ ಸೂರ್ಯ ನೀಡಿದ್ದ ಹೇಳಿಕೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಎಸ್.ಎಂ. ಸುಬ್ರಮಣಿಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದಿದ್ದಾರೆ.

ಟ್ವೀಟ್ ಮಾಡಿದ್ದ ಸೂರ್ಯ, ತಮಿಳು ನಾಡಿನಲ್ಲಿ ಮೂವರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಪರೀಕ್ಷೆಯ ಅವಶ್ಯಕತೆಯನ್ನು ಪ್ರಶ್ನಿಸಿರುವ ಅವರು, ಲಾಕ್‌ಡೌನ್ ಹೇರಿದ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಉತ್ತಮ ತರಬೇತಿ ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿರುವ ವಿದ್ಯಾರ್ಥಿಗಳು ಮತ್ತು ಕಡಿಮೆ ಅಥವಾ ಯಾವುದೇ ಸೌಲಭ್ಯಗಳಿಲ್ಲದೆ ಪರೀಕ್ಷೆ ಬರೆಯಲು ಪ್ರಯತ್ನಿಸುತ್ತಿರುವವರ ನಡುವಿನ ಸಾಮಾನ್ಯ ವ್ಯತ್ಯಾಸವನ್ನು ತೀವ್ರವಾಗಿ ಟೀಕಿಸಿದ್ದರು.

'ಕೊರೊನಾ ವೈರಸ್‌ನಿಂದಾಗಿ ತಮ್ಮ ಜೀವಕ್ಕೆ ಹೆದರಿ, ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯವನ್ನು ನೀಡುವ ನ್ಯಾಯಾಲಯ, ವಿದ್ಯಾರ್ಥಿಗಳನ್ನು ಮಾತ್ರ ನಿರ್ಭಯವಾಗಿ ಹೋಗಿ ಪರೀಕ್ಷೆಗಳನ್ನು ಬರೆಯುವಂತೆ ಆದೇಶಿಸುತ್ತದೆ' ಎಂದು ತಮಿಳು ಭಾಷೆಯಲ್ಲಿ ಬರೆದ ಪತ್ರವನ್ನು ಲಗತ್ತಿಸಿ ಟ್ವೀಟ್ ಮಾಡಿದ್ದರು.

ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗೆ ಬರೆದಿರುವ ಪತ್ರದಲ್ಲಿ, ನಟ ಸೂರ್ಯ ಅವರು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಗಾಂಭೀರ್ಯತೆಯನ್ನು ಪ್ರಶ್ನಿಸುವ ರೀತಿಯಲ್ಲಿ ಕೀಳುಮಟ್ಟದ ಟೀಕೆಗಳನ್ನು ಮಾಡಿದ್ದಾರೆ. ಹೀಗಾಗಿ ನ್ಯಾಯಾಂಗ ನಿಂದನೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೂರ್ಯ ಅವರ ಹೇಳಿಕೆಯು ನ್ಯಾಯಾಲಯದ ತಿರಸ್ಕಾರಕ್ಕೆ ಸಮನಾಗಿದೆ. ಈ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಾಧೀಶರ ಮೇಲೆ ನಂಬಿಕೆ, ಗೌರವ ಅವರಿಗಿಲ್ಲ ಎಂಬುದನ್ನು ತೋರಿಸುತ್ತದೆ. ಇದರಿಂದ ಸಾರ್ವಜನಿಕರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ, ವಿಶ್ವಾಸ, ಗೌರವ ಹೊರಟುಹೋಗುತ್ತದೆ ಎಂದು ನ್ಯಾಯಾಧೀಶ ಸುಬ್ರಹ್ಮಣ್ಯಂ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು